ಮಂಗಳೂರು: ‘ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿಲ್ಲ’-ಪೊಲೀಸ್ ಆಯಕ್ತರು – ಫ್ಯಾಕ್ಟ್ ಚೆಕ್

ಉಳ್ಳಾಲದ ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್ ಎಂಬವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಮೂವರು ದಾಳಿ ಯತ್ನ ನಡೆಸಿದ್ದರು ಎಂಬುದಾಗಿ ಹರಡಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ.

News Desk
1 Min Read
File Photo
Highlights
  • ಈ ಸುದ್ದಿ ನಿಜವೇ?? : ಸುಳ್ಳು ಸುದ್ದಿ

ಮಂಗಳೂರು, ಆ 03 : ಉಳ್ಳಾಲದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ಯತ್ನ ನಡೆದಿದೆ ಎನ್ನಲಾದ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ಆ ವ್ಯಕ್ತಿಯೇ ಸ್ಪಷ್ಟಪಡಿಸಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

ಉಳ್ಳಾಲದ ಬಿಜೆಪಿ ಕಾರ್ಯಕರ್ತ ಕಿಶೋರ್ ಸಾಲ್ಯಾನ್ ಎಂಬವರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಮೂವರು ದಾಳಿ ಯತ್ನ ನಡೆಸಿದ್ದರು ಎಂಬುದಾಗಿ ಹರಡಿರುವ ಸುದ್ದಿಯಲ್ಲಿ ಸತ್ಯಾಂಶವಿಲ್ಲ. ಈ ಬಗ್ಗೆ ನಾನೇ ಆ ವ್ಯಕ್ತಿಯ ಬಳಿ ತೆರಳಿ ಮಾತನಾಡಿದಾಗ ತನ್ನ ಮೇಲೆ ಯಾರೂ ದಾಳಿ ನಡೆಸಿಲ್ಲ ಮತ್ತು ನನ್ನನ್ನು ಫಾಲೋ ಮಾಡಿಕೊಂಡು ಬಂದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.

ನನ್ನ ಮೇಲೂ ದಾಳಿಯಾಗಬಹುದು ಎಂದು ಕಲ್ಪಿಸಿ ದಾಳಿ ಯತ್ನದ ಬಗ್ಗೆ ಹೇಳಿದ್ದೆ  ಎಂದು ಆತ ಹೇಳಿದ್ದಾನೆ. ಆತನ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಸೆಂಟ್ರಿಂಗ್ ಕೆಲಸ ಮಾಡುತ್ತಿರುವ ಕಿಶೋರ್‍ ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿರುವಾಗ ನಿರ್ಜನ ಪ್ರದೇಶದಲ್ಲಿ ಮೂವರು ಆಗಂತಕರು ಮಾರಕಾಸ್ತ್ರಗಳನ್ನು ಹಿಡಿದು ಅಟ್ಟಾಡಿಸಿಕೊಂಡು ಬಂದಿದ್ದು, ಪ್ರಾಣ ರಕ್ಷಣೆಗಾಗಿ ಕಿಶೋರ್ ಅಂಗಡಿಯೊಂದಕ್ಕೆ ಓಡಿದ್ದರು ಎಂದು ಸುದ್ದಿಯಾಗಿತ್ತು. ಇದೀಗ ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.

- Advertisement -

- Advertisement -
Share this Article
Leave a comment
adbanner