ಹಾಸನ: ಪಕ್ಷದ ಕಾರ್ಯಕರ್ತನಿಗೆ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಬಿಜೆಪಿ ನಾಯಕ

ಬಿಜೆಪಿಯ ಕಾರ್ಯಕಮವೊಂದರಲ್ಲಿ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಎಂಬ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

News Desk
1 Min Read

ಹಾಸನ: ಬಿಜೆಪಿ ನಾಯಕರೊಬ್ಬರು ತನ್ನ ಪಕ್ಷದ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಲಾಠಿಯಿಂದ ಹಲ್ಲೆ ನಡೆಸಿದ ಘಟನೆ ಅರಸೀಕೆರೆಯಲ್ಲಿ ನಡೆದಿದೆ.

 

ಬಿಜೆಪಿಯ ಕಾರ್ಯಕಮವೊಂದರಲ್ಲಿ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಎಂಬ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

 

- Advertisement -

ವರ್ಷದ ಹಿಂದೆ ಬಿಜೆಪಿ ಸಮಾವೇಶದ ವೇಳೆ ಅರಸೀಕೆರೆ ಬಿಜೆಪಿ ಟಿಕೇಟ್ ಆಕಾಂಕ್ಷಿ ಎನ್.ಆರ್.ಸಂತೋಷ್ ಹಾಗೂ ವಿಜಯ್ ಕುಮಾರ್ ಬಣದ ನಡುವೆ ಗಲಾಟೆ ನಡೆದಿತ್ತು. ಹಲ್ಲೆಗೊಳಗಾದ ಕುಮಾರ್ ಎನ್.ಆರ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಬಿಜೆಪಿಯ ಬೂತ್​ ವಿಜಯ್ ಅಭಿಯಾನ​ ನಿಮಿತ್ತ ಗ್ರಾಮಗಳಿಗೆ ತೆರಳಿದ್ದ ವೇಳೆ ಕೆಲ ಜನರಿಂದ ವಿಜಯ್ ಕುಮಾರ್​ಗೆ ಅವಮಾನವಾಗಿತ್ತು. ಆ ಘಟನೆ ವೀಡಿಯೋ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಕೂಡ ಮಾಡಿದ್ದ ಎನ್ನಲಾಗಿದೆ.

 

ಈ ಹಿನ್ನೆಲೆಯಲ್ಲಿ ಕೋಪಗೊಂಡ ವಿಜಯ್ ಕುಮಾರ್ ಇಂದು(ಜ.25) ಅರಸೀಕೆರೆ ನಗರಸಭೆ ಎದುರು ತಮ್ಮ ಕಾರು ಚಾಲಕನ ಜೊತೆ ಸೇರಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಾಳು ಕುಮಾರ್ ಅವರನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
TAGGED:
Share this Article
Leave a comment
adbanner