ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ 6 ಮಂದಿಯ ಹೆಸರು ಉಲ್ಲೇಖಿಸಿ ವ್ಯಕ್ತಿ ಆತ್ಮಹತ್ಯೆ

ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು  ಹೇಳಲಾಗುತ್ತಿದೆ.

admin
1 Min Read

ಬೆಂಗಳೂರು, ಜ.2: ಡೆತ್‍ ನೋಟ್‍ ನಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿ ಆರು ಮಂದಿಯ ಹೆಸರು ಉಲ್ಲೇಖಿಸಿ  ವ್ಯಕ್ತಿಯೊರ್ವ ಕಾರಿನಲ್ಲಿ ಗುಂಡು ಹಾರಿಸಿಕೊಂಡು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ವರದಿಯಾಗಿದೆ

ಎಚ್‍ಎಸ್‍ಆರ್ ಲೇಔಟ್ ನಿವಾಸಿ ಪ್ರದೀಪ್( 47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ಘಟನೆ ನಡೆದಿದ್ದು, ಪ್ರದೀಪ್ ಕಾರಿನಲ್ಲಿ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು  ಹೇಳಲಾಗುತ್ತಿದೆ.

ಘಟನೆ ಸಂಬಂಧ ಕಗ್ಗಲಿಪುರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

- Advertisement -
TAGGED: ,
Share this Article
Leave a comment
adbanner