ಶಿಕ್ಷಣ ಸಚಿವ ನಾಗೇಶ್ ಸಂಪುಟದಿಂದ ಕೈಬಿಡುವಂತೆ ರುಪ್ಸಾ 3ನೇ ಬಾರಿ ಪ್ರಧಾನಿಗೆ ಪತ್ರ

ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಮೂರನೇ ಬಾರಿ ಪ್ರಧಾನಿಗೆ ಪತ್ರ ಬರೆಯುತ್ತಿದ್ದೇವೆ.

News Desk
1 Min Read

ಬೆಂಗಳೂರು, ಅ.27 ಶಿಕ್ಷಣ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ತಕ್ಷಣ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ವಜಾ ಮಾಡಬೇಕು ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ಸಂಘ (ರುಪ್ಸಾ)ದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಶೋಕಿ ಮಾಡೋರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿದ್ದಾರೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರನ್ನ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಮೂರನೇ ಬಾರಿ ಪ್ರಧಾನಿಗೆ ಪತ್ರ ಬರೆಯುತ್ತಿದ್ದೇವೆ. ವಜಾಗೊಳಿಸದಿದ್ದರೇ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಹಾಗೂ ಶಿಕ್ಷಣ ಇಲಾಖೆಯಲ್ಲಿ ಲಂಚವಿಲ್ಲದೆ ಯಾವುದೇ ಕೆಲಸಗಳು ಆಗುವುದಿಲ್ಲ ಎಂಬ ಪರಿಸ್ಥಿತಿಯಿದೆ. ಆರ್.ಆರ್ ನೀಡಲು ಕೂಡಾ ಲಂಚ ಪಡೆಯಲಾಗುತ್ತಿದೆ. 10 ವರ್ಷಗಳಿಗೊಮ್ಮೆ ಮಾನ್ಯತೆ ನವೀಕರಣ ಹೊಂದಿರಬೇಕೆಂದು ಹೈಕೋರ್ಟ್ ಹೇಳಿದೆ ಆದರೆ 2 ವರ್ಷಕ್ಕೊಮ್ಮೆ ಲಂಚ ಪಡೆಯುತ್ತಿರುವ ಅಧಿಕಾರಿಗಳ ಸಂಖ್ಯೆ ಹೆಚ್ಚಾಗಿದೆ. ಇಲಾಖೆಯ ಬಹುತೇಕ ಕೆಲಸಗಳಿಗೆ ಆನ್ ಲೈನ್ ವ್ಯವಸ್ಥೆ ಇಲ್ಲ. ಆನ್ ಲೈನ್ ವ್ಯವಸ್ಥೆ ಇಲ್ಲದ್ದಕ್ಕೆ ಅಧಿಕಾರಿಗಳೆಲ್ಲಾರೂ ಲಂಚಬಾಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

- Advertisement -
TAGGED:
Share this Article
Leave a comment
adbanner