ಕಡಬ: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕ ಕುಸಿದು ಬಿದ್ದು ಮೃತ್ಯು

News Desk
0 Min Read

ಕಡಬ, ಆ 15: ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
Share this Article
Leave a comment
adbanner