ಉಡುಪಿ: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು ಪ್ರಕರಣ-ಆರೋಪಿಗೆ ಶಿಕ್ಷೆ ಪ್ರಕಟ

ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ದರ್ಶನ್‌ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ

News Desk
1 Min Read

ಉಡುಪಿ, ಸೆ 05 : ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2018 ಸೆಪ್ಟಂಬರ್ 4 ರಂದುರಂದುಸಂಜೆ 4.45 ರ ಸುಮಾರಿಗೆ ಉಡುಪಿ ತಾಲೂಕು ಉದ್ಯಾವರ ಕೊಪ್ಲದ ನಿವಾಸಿ ದರ್ಶನ್ ಎಂಬಾತನು ಮಣಿಪಾಲ-ಉಡುಪಿ ರಾ.ಹೆದ್ದಾರಿಯ ಏಕಮುಖ ಸಂಚಾರ ರಸ್ತೆಯಲ್ಲಿ ಅಜಾಗರೂಕತೆಯಿಂದ ಬೈಕನ್ನು ಚಲಾಯಿಸಿಕೊಂಡು ಬಂದು ಶಿವಳ್ಳಿ ಗ್ರಾಮದ ಎಂ.ಜಿ.ಎಂ. ಕಾಲೇಜಿನ ಡಾ.ಟಿ.ಎಂ.ಎ. ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಿದ್ದೇಶ್ವರಪ್ಪ ಎಂಬುವರಿಗೆ ಡಿಕ್ಕಿ ಹೊಡೆದ ಪರಿಣಾಮ, ಅವರು ರಸ್ತೆಗೆ ಬಿದ್ದು, ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿರುವ ಹಿನ್ನೆಲೆ, ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತನಿರೀಕ್ಷಕರು ಪ್ರಕರಣದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ದರ್ಶನ್‌ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 10000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದಮಂಡಿಸಿದ್ದಾರೆ.

- Advertisement -
Share this Article
Leave a comment
adbanner