ಕಾಪು: ಡಿಕ್ಕಿ ಹೊಡೆದು ಬೈಕ್ ಸವಾರ ಪರಾರಿ: ಪಾದಚಾರಿ ಸಾವು

ಮೃತರನ್ನು ಸುರೇಶ್ ಶೇರಿಗಾರ್(50) ಎಂದು ಗುರುತಿಸಲಾಗಿದೆ.

admin
0 Min Read
Photo by kat wilcox on Pexels.com

ಕಾಪು: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾತ್ರಿ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಸುರೇಶ್ ಶೇರಿಗಾರ್(50) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ಬೈಕ್ ಸವಾರ ಪರಾರಿಯಾಗಿದ್ದಾನೆ. ಸುರೇಶ್ ಶೇರಿಗಾರ್ ಮಂಗಳೂರು-ಉಡುಪಿ ರಸ್ತೆಯನ್ನು ದಾಟುತ್ತಿದ್ದಾಗ ಕಾಪು ಕಡೆಯಿಂದ ಪಾಂಗಾಳ ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ಶೇರಿಗಾರ್, ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತ ನಡೆಸಿದ ಬೈಕ್ ಸವಾರ ಬೈಕ್ ನಿಲ್ಲಿಸದೆ ಪರಾರಿಯಾಗಿದ್ದಾನೆ. ಕಾಪು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -
TAGGED:
Share this Article
Leave a comment
adbanner