ಉಡುಪಿ, ಜು 29: ಕರಾವಳಿ ಜಿಲ್ಲೆಗಳಲ್ಲಿ ಸರಣಿ ಅಪರಾಧ ಕೃತ್ಯಗಳ ಹಿನ್ನಲೆ ಉಡುಪಿಯಲ್ಲೂ ಪೋಲಿಸ್ ಬಂದೋಬಸ್ತ್ ತೀವ್ರಗೊಳಿಸಲಾಗಿದೆ.
ಉಡುಪಿಯ ರಾಷ್ಟ್ರೀಯ ಹೆದ್ದಾರಿ 66 ಸೇರಿದಂತೆ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಪೊಲೀಸರು ತಪಸಣೆ ನಡೆಸುತ್ತಿದ್ದಾರೆ.
ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 11 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಪೋಲಿಸರು ನಿರ್ಮಿಸಿದ್ದಾರೆ.
ಹೊರ ರಾಜ್ಯ, ಹೊರ ಜಿಲ್ಲೆಯ ನೊಂದಣಿ ಹೊಂದಿರುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ.
ಸಂಶಯಾಸ್ಪದ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಪ್ರಮುಖ ಜಂಕ್ಷನ್, ಸೂಕ್ಷ್ಮ ಪ್ರದೇಶಗಳಲ್ಲಿ ಪೋಲಿಸರಿಂದ ಚೆಕ್ಕಿಂಗ್ ತೀವ್ರಗೊಂಡಿದೆ.
- Advertisement -
ಉದ್ಯಾವರದ ಬಲಾಯಿಪಾದೆ, ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ಮುಂದುವರೆದಿದೆ.