ಗಂಗೊಳ್ಳಿ: ಮನೆಯೊಂದರ‌ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ

ಗಂಗೊಳ್ಳಿ ಬರ್‌ಗೇರಿ ನಿವಾಸಿ ಗಣೇಶ ಶೇರಿಗಾರ‌ ಎಂಬವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

News Desk
0 Min Read

ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮನೆಯೊಂದಕ್ಕೆ ಆ.26ರಂದು ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು 22ಸಾವಿರ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಗಂಗೊಳ್ಳಿ ಬರ್‌ಗೇರಿ ನಿವಾಸಿ ಗಣೇಶ ಶೇರಿಗಾರ‌ ಎಂಬವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯಲ್ಲಿ 10 ಕ್ವಿಂಟಾಲ್ ಕೊಚ್ಚಿಗೆ ಅಕ್ಕಿ ಇರುವುದು ಕಂಡುಬಂದಿದೆ. ಸ್ವಾಧೀನಪಡಿಸಿಕೊಂಡ ಅಕ್ಕಿಯ ಮೌಲ್ಯ 22, ಸಾವಿರ ರೂಪಾಯಿ ಆಗಿದೆ.. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

- Advertisement -
TAGGED:
Share this Article
Leave a comment
adbanner