ಕುಂದಾಪುರ: ಆಗಸ್ಟ್ 22ರಿಂದ 29 : ಲೋಕಾಯುಕ್ತ ತನಿಖೆಗೆ ಅರ್ಜಿ ಸಲ್ಲಿಸಲು ಅವಕಾಶ : ಲೋಕಾಯುಕ್ತ ಕಚೇರಿ ಪ್ರಕಟಣೆ

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ.

News Desk
1 Min Read

ಕುಂದಾಪುರ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆ‌ ತಿಳಿಸಿದೆ.

ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಆಗಸ್ಟ್ 22 ರಂದು ಬೈಂದೂರು ಪ್ರವಾಸಿ ಮಂದಿರ, ಆಗಸ್ಟ್ 23 ರಂದು ಕುಂದಾಪುರ ಪ್ರವಾಸಿ ಮಂದಿರ, ಆಗಸ್ಟ್ 24 ರಂದು ಹೆಬ್ರಿ ಪ್ರವಾಸಿ ಮಂದಿರ, ಆಗಸ್ಟ್ 25 ರಂದು ಕಾರ್ಕಳ ಪ್ರವಾಸಿ ಮಂದಿರ, ಆಗಸ್ಟ್ 26 ರಂದು ಬ್ರಹ್ಮಾವರ ಚಾಂತಾರು ಗ್ರಾಮ ಪಂಚಾಯತ್ ಕಚೇರಿ ಆವರಣ ಹಾಗೂ ಆಗಸ್ಟ್ 29 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರ ವರೆಗೆ ಸ್ವೀಕರಿಸಲಾಗುವುದು.

ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ. ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಆವರಣ ಹಾಗೂ ಆಗಸ್ಟ್ 29 ರಂದು ಕಾಪು ಪುರಸಭೆ ಕಚೇರಿ ಆವರಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಸ್ವೀಕರಿಸಲಾಗುವುದು. ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೇರವಾಗಿ ಉಡುಪಿ ಲೋಕಾಯುಕ್ತ ಕಛೇರಿಗೆ ನೀಡಬಹುದಾಗಿದೆ.

ಕಾರ್ಯಕ್ರಮದಲ್ಲಿ ಉಡುಪಿ ಘಟಕದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದು, ಸಾರ್ವಜನಿಕರು ಸರ್ಕಾರಿ ಕೆಲಸ ಕಾರ್ಯಗಳಲ್ಲಿ ತೊಂದರೆ ಅನುಭವಿಸಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ. ಸಂಖ್ಯೆ: 0820-2958881 ಹಾಗೂ ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 0820-2536661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

- Advertisement -
TAGGED:
Share this Article
Leave a comment
adbanner