ಸಿದ್ದಾಪುರ: 9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

ಹಾಲಾಡಿ ಪ್ರೌಢಶಾಲೆಯ ವಿದ್ಯಾರ್ಥಿ ಗಣೇಶ (14) ಮೃತ ದುರ್ದೈವಿ.

News Desk
1 Min Read

ಸಿದ್ದಾಪುರ, ಆ 20: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಆಘಾತಕಾರಿ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ.

ಹಾಲಾಡಿ ಪ್ರೌಢಶಾಲೆಯ ವಿದ್ಯಾರ್ಥಿ ಗಣೇಶ (14) ಮೃತ ದುರ್ದೈವಿ. ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಾಲೆಗೆ ಹೋಗಲು ಮನಸ್ಸಿಲ್ಲದೇ ಅಥವಾ ಇನ್ನಾವುದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಹೇಳಲಾಗುತ್ತಿದೆ.

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ9152987821

.

- Advertisement -
TAGGED:
Share this Article
Leave a comment
adbanner