ಮಂಗಳೂರು: ಫಾಝಿಲ್‌ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್‌ ಕುಮಾರ್‌ ನೇಮಕ

News Desk
0 Min Read

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಕೊಲೆಯಾದ ಫಾಝಿಲ್ ಕುಟುಂಬಸ್ಥರು ಪೊಲೀಸ್ ಕಮೀಷನರ್‌ಗೆ ಲಿಖಿತ ಮನವಿ ಮಾಡಿದ ಹಿನ್ನೆಲೆ ಎಸಿಪಿ ಮಹೇಶ್ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, ನಿಗದಿತ ಅವಧಿಯಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

- Advertisement -
TAGGED: ,
Share this Article
Leave a comment
adbanner