ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಕೊಲೆ ಯತ್ನ ನಡೆದಿದೆ. ಅಂಗಡಿಗೆ ನುಗ್ಗಿ ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿದ್ದು, ಗಾಯಾಳು ಚಿಂತಾಜನಕ ಎನ್ನುವ ಮಾಹಿತಿ ಲಭ್ಯವಾಗಿದೆ.




ಮಂಗಳ ಪೇಟೆಯ ವಾಝಿ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ವಾಝಿಯ ಮೇಲೆ ಅಂಗಡಿಯ ಎದುರಿನ ಜಗಲಿಯಲ್ಲೇ ತಲವಾರಿನಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಪ್ಪಿಸಿಕೊಳ್ಳಲು ಯತ್ನಿಸಿದರು ಸಾಧ್ಯವಾಗಲಿಲ್ಲ.
ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ವಾಝಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ಇನ್ನಷ್ಟೇ ತಿಳಿದುಬರಬೇಕಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.