ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಭೇದಿಸಿದ ಪೊಲೀಸ್ ತಂಡಕ್ಕೆ ಬಹುಮಾನ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.

News Desk
1 Min Read

ಮಂಗಳೂರು, ಆ 23: ಸುಳ್ಯದ ಬೆಳ್ಳಾರೆಯಲ್ಲಿ ಜುಲೈ 26 ರಂದು ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ಪ್ರಶಸ್ತಿ ಬಹುಮಾನ ನೀಡಿ ಪ್ರಶಂಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಹಂತಕರು ಯಾವುದೇ ಸುಳಿವು ಬಿಟ್ಟುಕೊಡದ ಕಾರಣ ಪ್ರಕರಣ ಪೊಲೀಸರಿಗೆ ಸವಾಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹಾಗೂ ಪಶ್ಚಿಮ ವಲಯದ ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು.ಈ ಹಿನ್ನಲೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಆಗಸ್ಟ್ 22 ರ ಸೋಮವಾರ, ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -
Share this Article
Leave a comment
adbanner