ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ಜಿಲ್ಲಾಡಳಿತ ನಿರ್ಬಂಧ ಹೇರಿದ್ದು, ಆಗಸ್ಟ್ 3ರ ಬೆಳ್ಳಗ್ಗಿನವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.
ಬೆಳ್ಳಾರೆ ಮತ್ತು ಸುರತ್ಕಲ್ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ಜುಲೈ 29ರ ಸಂಜೆ 6 ಗಂಟೆಯಿಂದ ಆಗಸ್ಟ್ 1ರ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದರು.
ಇನ್ನು ಬೆಳಗ್ಗೆನಿಂದ ಸಂಜೆ 6 ಗಂಟೆಯೊಳಗೆ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಆದೇಶವನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇನ್ನೆರಡು ದಿನಗಳ ಕಾಲ ಮದ್ಯದಂಗಡಿಗಳನ್ನು ಬಂದ್ ಮಾಡಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.