ಮಂಗಳೂರು: ಕಳೆದ ರಾತ್ರಿ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮುಹಮ್ಮದ್ ಫಾಝಿಲ್(23) ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಇದೀಗ ಮೃತದೇಹವು ಆ್ಯಂಬುಲೆನ್ಸ್ ಮೂಲಕ ಇಲ್ಲಿನ ಮಂಗಳಪೇಟೆಯಲ್ಲಿರುವ ಫಾಝಿಲ್ರವರ ಮನೆ ತಲುಪಿದೆ. ಬಳಿಕ ಅಲ್ಲಿಂದ ಮೃತದೇಹವನ್ನು ಕಾಲ್ನಡಿಗೆಯಲ್ಲಿ ಮಂಗಳಪೇಟೆ ಮುಹಿಯುದ್ದೀನ್ ಮಸೀದಿಗೆ ಕೊಂಡೊಯ್ಯಲಾಯಿತು. ಅಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಸೀದಿ ವಠಾರದಲ್ಲಿ ಸಾವಿರಾರು ಮಂದಿ ಜಮಾಯಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಕಳೆದ ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿ ಅಂಗಡಿಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಅವರನ್ನು ಕೊಲೆಗೈದಿದ್ದಾರೆ.