ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ

ರಾಜು ಅವರು ಇಂದು ಬೆಳಗ್ಗೆ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

News Desk
1 Min Read
Screengrab

ನವದೆಹಲಿ, ಆ 10: ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ , ನಟ ರಾಜು ಶ್ರೀವಾಸ್ತವ್  ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲು ಮಾಡಿದ್ದಾರೆ.

ರಾಜು ಅವರು ಇಂದು ಬೆಳಗ್ಗೆ ಜಿಮ್‌ನಲ್ಲಿ ಟ್ರೆಡ್‌ಮಿಲ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ತರಬೇತುದಾರರು ಅವರನ್ನು ಏಮ್ಸ್ ಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರಿಗೆ ಎರಡು ಬಾರಿ ಕಾರ್ಡಿಯೋಪಲ್ಮನರಿ ರೆಸಸಿಟೇಶನ್ (CPR) ನೀಡಲಾಗಿದೆ ಎಂದು ತಿಳಿದುಬಂದಿದೆ.

ಹಾಸ್ಯನಟ ಸದ್ಯ ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿದ್ದಾರೆ . ಮತ್ತೊಬ್ಬ ಸ್ಟ್ಯಾಂಡ್-ಅಪ್ ಕಾಮಿಡಿಯನ್, ಸುನಿಲ್ ಪಾಲ್ ಇನ್ಸ್ಟಾಗ್ರಾಮ್ನಲ್ಲಿ ಶ್ರೀ ಶ್ರೀವಾಸ್ತವ್ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಬರೆದುಕೊಂಡಿದ್ದಾರೆ.ರಾಜು ಅವರು ಹಲವಾರು ಬಾಲಿವುಡು ಚಿತ್ರ ಹಾಗೂ ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸಿರುವ ರಾಜು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.

- Advertisement -
Share this Article
Leave a comment
adbanner