ತಮಿಳುನಾಡಿನಲ್ಲಿ ವ್ಯಾನ್ ಪಲ್ಟಿಯಾಗಿ ಶಬರಿಮಲೆ ಯಾತ್ರಿಕ ಸಾವು

ಶ್ರುಮುಲು ನಾಯಕ್ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಐವರನ್ನು ವೇದಸಂದೂರು ಮತ್ತು ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

News Desk
0 Min Read

ದಿಂಡಿಗಲ್: ಆಂಧ್ರಪ್ರದೇಶದಿಂದ 22 ಶಬರಿಮಲೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಯಾತ್ರಾರ್ಥಿಗಳು ಕೇರಳದ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿ ಆಂಧ್ರಪ್ರದೇಶಕ್ಕೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಇವರ ವ್ಯಾನ್ ವೇದಸಂದೂರು ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ವ್ಯಾನ್ ಪಲ್ಟಿಯಾಗಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.

ಶ್ರುಮುಲು ನಾಯಕ್ (42) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಐವರನ್ನು ವೇದಸಂದೂರು ಮತ್ತು ದಿಂಡಿಗಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೂಂಬೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
Share this Article
Leave a comment
adbanner