ದೆಹಲಿ ಯುವತಿ ಅಪಘಾತ ಪ್ರಕರಣ – ಐವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿತ್ತು.

News Desk
1 Min Read

ನವದೆಹಲಿ, ಜ 02 : ನಗರದ ಹೊರಭಾಗದ ಸುಲ್ತಾನ್‌ಪುರಿಯಲ್ಲಿನ ಭಾನುವಾರ ನಡೆದ ಭೀಕರ ಅಪಘಾತ ನಡೆದು ಮೃತದೇಹವನ್ನು ಕಾರಿನಡಿ ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿರುವ ಘಟನೆ ಸಂಬಂಧ ಐವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಸೋಮವಾರ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಮಾರುತಿ ಬಲೆನೊ ಕಾರಿನಲ್ಲಿದ್ದ ಐವರನ್ನು ಬಂಧಿಸಿದ ದೆಹಲಿ ಪೊಲೀಸರು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಸಂಬಂಧ ದೀಪಕ್‌ ಖನ್ನಾ (26), ಅಮಿತ್‌ ಖನ್ನಾ (25), ಕೃಷ್ಣಾ (27), ಮಿಥುನ್‌ (26) ಮತ್ತು ಮನೋಜ್‌ ಮಿತ್ತಲ್‌ ಪೊಲೀಸ್ ಕಸ್ಟಡಿ ಗೆ ಒಳಪಡಿಸಲಾಗಿದ್ದು, ಇವರ ವಿರುದ್ಧ ಐಪಿಸಿ ಸೆಕ್ಷನ್‌ 279 ಮತ್ತು 304–ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಕೂಟಿಗೆ ಕಾರು ಡಿಕ್ಕಿ ಹೊಡೆದಿದ್ದರಿಂದ 20 ವರ್ಷದ ಯುವತಿಯೊಬ್ಬರು ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ.ವರೆಗೂ ಎಳೆದೊಯ್ದಿತ್ತು. ರಸ್ತೆಯ ಮೇಲೆ ಯುವತಿಯ ಮೃತದೇಹ ನಗ್ನಾವಸ್ಥೆಯಲ್ಲಿ ಬಿದ್ದಿರುವ, ಆಕೆಯ ಕಾಲುಗಳು ಮುರಿದಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾನುವಾರ ಹರಿದಾಡಿತ್ತು.

- Advertisement -

- Advertisement -
TAGGED:
Share this Article
Leave a comment
adbanner