ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ.